Lorem Ipsum has been the industry’s standard dummy text ever since the 1500s.
ಗಜೇಂದ್ರಗಡ, ಜುಲೈ 12: ಆರೋಗ್ಯ ಕ್ಷೇತ್ರದಲ್ಲಿ ಉನ್ನತ ಶಿಕ್ಷಣ ಪಡೆದು ಉತ್ತಮ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವ ವಿದ್ಯಾರ್ಥಿಗಳಿಗೆ ಗಜೇಂದ್ರಗಡದ ತಾರೀಣಿ ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಸೈನ್ಸಸ್ ಸುವರ್ಣಾವಕಾಶ ಕಲ್ಪಿಸಿದೆ. 2026–27ನೇ ಶೈಕ್ಷಣಿಕ ಸಾಲಿನ B.Sc. Nursing ಹಾಗೂ GNM Nursing ಕೋರ್ಸ್‌ಗಳ ಪ್ರವೇಶಾತಿ ಪ್ರಕ್ರಿಯೆ ಆರಂಭಗೊಂಡಿದ್ದು, ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಪ್ರಸ್ತುತ ಭಾರತ ಸೇರಿದಂತೆ ವಿಶ್ವದಾದ್ಯಂತ ಆರೋಗ್ಯ ಸೇವಾ ಕ್ಷೇತ್ರವು ವೇಗವಾಗಿ ಬೆಳೆಯುತ್ತಿದ್ದು, ನರ್ಸಿಂಗ್ ವೃತ್ತಿಪರರಿಗೆ ಹೆಚ್ಚಿನ ಬೇಡಿಕೆ ನಿರ್ಮಾಣವಾಗಿದೆ. ಉತ್ತಮ ಸಂಬಳ, ಗೌರವಯುತ ಉದ್ಯೋಗ ಹಾಗೂ ವಿದೇಶಗಳಲ್ಲಿ ವೃತ್ತಿ ಅವಕಾಶಗಳನ್ನು ಪಡೆಯಲು ನರ್ಸಿಂಗ್ ಶಿಕ್ಷಣವು ವಿದ್ಯಾರ್ಥಿಗಳಿಗೆ ಉತ್ತಮ ಆಯ್ಕೆಯಾಗಿದೆ.
ತಾರೀಣಿ ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಸೈನ್ಸಸ್‌ನಲ್ಲಿ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಅಗತ್ಯವಾದ ಎಲ್ಲಾ ಸೌಲಭ್ಯಗಳನ್ನು ಒದಗಿಸಲಾಗಿದೆ. ಸಂಸ್ಥೆಯೊಂದಿಗೆ ಸಂಯೋಜಿತವಾಗಿರುವ ಸ್ವಂತ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಪ್ರಾಯೋಗಿಕ ಕ್ಲಿನಿಕಲ್ ತರಬೇತಿ, ಅನುಭವಿ ಬೋಧಕ ಸಿಬ್ಬಂದಿ, ಆಧುನಿಕ ಪ್ರಯೋಗಾಲಯಗಳು, ಕಂಪ್ಯೂಟರ್ ಲ್ಯಾಬ್, ಡಿಜಿಟಲ್ ಲೈಬ್ರರಿ, ವಿದ್ಯಾರ್ಥಿವೇತನ ಸೌಲಭ್ಯ, ವಿದ್ಯಾರ್ಥಿಗಳು ಮತ್ತು ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಹಾಸ್ಟೆಲ್ ವ್ಯವಸ್ಥೆ ಹಾಗೂ ಉದ್ಯೋಗ ಮಾರ್ಗದರ್ಶನ ಮತ್ತು ಪ್ಲೇಸ್‌ಮೆಂಟ್ ಸಹಾಯವನ್ನು ಸಂಸ್ಥೆ ನೀಡುತ್ತಿದೆ.
ನರ್ಸಿಂಗ್ ಶಿಕ್ಷಣದ ಮೂಲಕ ಭಾರತ ಹಾಗೂ ವಿದೇಶಗಳಲ್ಲಿ ಉತ್ತಮ ಉದ್ಯೋಗಾವಕಾಶಗಳನ್ನು ಪಡೆಯಲು ಬಯಸುವ ವಿದ್ಯಾರ್ಥಿಗಳು ಹಾಗೂ ಪೋಷಕರು ಕಾಲೇಜಿಗೆ ಭೇಟಿ ನೀಡಿ, ಕೋರ್ಸ್‌ಗಳ ವಿವರ, ಪ್ರವೇಶಾತಿ ಪ್ರಕ್ರಿಯೆ ಹಾಗೂ ಇತರ ಸೌಲಭ್ಯಗಳ ಕುರಿತು ಮಾಹಿತಿ ಪಡೆದು ಪ್ರವೇಶಾತಿ ಪಡೆಯುವಂತೆ ಸಂಸ್ಥೆಯ ಪ್ರಾಂಶುಪಾಲರಾದ ಡಾ. ಸೋಮಶೇಖರಯ್ಯ ಕಲ್ಮಠ ತಿಳಿಸಿದ್ದಾರೆ.
ಸಂಪರ್ಕಕ್ಕೆ
ತಾರೀಣಿ ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಸೈನ್ಸಸ್
ಶ್ರೀ ಸಾಯಿದತ್ತ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ,
ಕುಷ್ಟಗಿ ರಸ್ತೆ, ಸಾಯಿರಾಮ ದೇವಸ್ಥಾನದ ಎದುರು,
ಗಜೇಂದ್ರಗಡ.
ಮೊಬೈಲ್: 98863 59310 / 70192 47947
“ಇಂದೇ ಪ್ರವೇಶ ಪಡೆಯಿರಿ – ನಿಮ್ಮ ಉಜ್ವಲ ಭವಿಷ್ಯದತ್ತ ಮೊದಲ ಹೆಜ್ಜೆ ಇಡಿ.”
