Top News

ಕಲಬುರಗಿ: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ

ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ..

ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದಲ್ಲಿ ಟೌನ್‌ಶಿಪ್ ಮಾಡಲು ಕೆಐಎಡಿಬಿಯಿಂದ ಸಾವಿರಾರು ಎಕರೆ ಭೂಮಿ ವಶಪಡಿಸಿಕೊಂಡಿದ್ದೀರಿ ಅಲ್ವಾ? ಹಾಗಾದರೆ ರೈತರ ಫಲವತ್ತಾದ ಜಮೀನು ಯಾಕೆ ಬೇಕು ಎಂದು ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ಶ್ರೀ ನಿಖಿಲ್ ಕುಮಾರಸ್ವಾಮಿ ಅವರು ಪ್ರಶ್ನಿಸಿದರು.
ಕಲಬುರಗಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕೆಐಎಡಿಬಿಯಲ್ಲಿ ಈಗಾಗಲೇ ಸುಮಾರು ಒಂದೂವರೆ ಲಕ್ಷ ಎಕರೆ ಭೂಮಿಯನ್ನು ವಶಪಡಿಸಿಕೊಳ್ಳಲಾಗಿದೆ. ಹಾಗಿದ್ದರೂ ಫಲವತ್ತಾದ ಭೂಮಿಯ ಮೇಲೆಯೇ ಯಾಕೆ ಕಣ್ಣು? ಎಂದು ಪ್ರಶ್ನಿಸಿದರು.
“ಕಲ್ಯಾಣ ಕರ್ನಾಟಕದಲ್ಲಿಯೇ ಸ್ಮಾರ್ಟ್, ಎಐ ಸಿಟಿ ಮಾಡಿದರೆ ಇಲ್ಲಿನ ಜನ ಬೇಡ ಎಂದಿದ್ದರಾ? ಅಲ್ಲಿ ಮಾಡಿದರೆ ಸಾವಿರಾರು ಜನರಿಗೆ ಕೆಲಸ ಸಿಗುತ್ತಿತ್ತು. ವಶಪಡಿಸಿಕೊಂಡಿರುವ ಲಕ್ಷಾಂತರ ಎಕರೆ ಭೂಮಿ ಬಿಟ್ಟು ಫಲವತ್ತಾದ ಭೂಮಿಯನ್ನೇ ವಶಪಡಿಸಿಕೊಳ್ಳುವ ಉದ್ದೇಶವೇನು?” ಎಂದು ಅವರು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.

Leave a Reply

Your email address will not be published. Required fields are marked *

error: Content is protected !!