ರೋಹಿತ್ ಶರ್ಮಾ ನಿವೃತ್ತಿ ವದಂತಿ ಬೆನ್ನಲ್ಲೇ ಫ್ಯಾನ್ಸ್‌ಗೆ ಗುಡ್ ನ್ಯೂಸ್ ಕೊಟ್ಟ BCCI!
ಭಾರತ ಹಾಗೂ ಇಂಗ್ಲೆಂಡ್ ನಡುವಿನ ಮೂರನೇ ಏಕದಿನ ಪಂದ್ಯವೇ ರೋಹಿತ್ ಶರ್ಮಾ ಅವರ ಕೊನೆಯ ಅಂತಾರಾಷ್ಟ್ರೀಯ ಪಂದ್ಯವಾಗಲಿದೆ ಎಂಬ ಊಹಾಪೋಹಗಳಿಗೆ ಬಿಸಿಸಿಐ ಸ್ಪಷ್ಟನೆ ನೀಡಿದೆ. ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ಈ ವದಂತಿಗಳನ್ನು ಸಂಪೂರ್ಣವಾಗಿ ತಳ್ಳಿಹಾಕಿದ್ದು, “ಲಾರ್ಡ್ಸ್‌ನಲ್ಲಿ ನಡೆಯುವ ಮೂರನೇ ಏಕದಿನ ಪಂದ್ಯವೇ ರೋಹಿತ್ ಶರ್ಮಾ ಅವರ ಕೊನೆಯ ಪಂದ್ಯ ಎಂಬ ಬಗ್ಗೆ ಯಾವುದೇ ಚರ್ಚೆಯೇ ನಡೆದಿಲ್ಲ. ರೋಹಿತ್ ಭಾರತದ ಏಕದಿನ ತಂಡದ ನಿಯಮಿತ ಸದಸ್ಯರಾಗಿದ್ದು, ತಂಡದ ಯೋಜನೆಗಳಲ್ಲಿ ಇರುವವರೆಗೂ ಭಾರತವನ್ನು ಪ್ರತಿನಿಧಿಸುತ್ತಾರೆ. ಆದ್ದರಿಂದ ಲಾರ್ಡ್ಸ್ ಪಂದ್ಯವೇ…
