ಹುಬ್ಬಳ್ಳಿ: ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕಿ ಮಗುವಿಗೆ ಜನ್ಮ ನೀಡಿದ ಪ್ರಕರಣ ಸಂಬಂಧಪಟ್ಟಂತೆ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ತನಿಖೆ ವೇಳೆ ಮತ್ತೊಂದು ಆಘಾತಕಾರಿ ಸಂಗತಿ ಬೆಳಕಿಗೆ ಬಂದಿದೆ ಎಂದು ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಮಾಹಿತಿ ನೀಡಿದರು….
ನಗರದಲ್ಲಿ ಮಾದ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಆರಂಭದಲ್ಲಿ ಅಪ್ರಾಪ್ತ ಬಾಲಕಿ ಹೆರಿಗೆ ಮಾಡಿದ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಲಾಗಿತ್ತು. ತನಿಖೆ ಮುಂದುವರಿಸಿದ ವೇಳೆ ಅದೇ ಕುಟುಂಬದ ಮತ್ತೊಬ್ಬ ಅಪ್ರಾಪ್ತ ವಯಸ್ಸಿನ ಬಾಲಕಿಯೂ ಮಗುವಿಗೆ ಜನ್ಮ ನೀಡಿರುವುದು ಪತ್ತೆಯಾಗಿದೆ ಎಂದು ಹೇಳಿದರು.
ಈ ಎರಡೂ ಪ್ರಕರಣಗಳ ಕುರಿತು ಪೊಲೀಸರು ಗಂಭೀರವಾಗಿ ತನಿಖೆ ನಡೆಸುತ್ತಿದ್ದು, ಘಟನೆಗೆ ಕಾರಣರಾದವರ ವಿರುದ್ಧ ಪೋಕ್ಸೊ ಕಾಯ್ದೆಯಡಿ ಹಾಗೂ ಸಂಬಂಧಿತ ಕಾನೂನುಗಳ ಅನ್ವಯ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
