ಭಾರತ ಹಾಗೂ ಇಂಗ್ಲೆಂಡ್ ನಡುವಿನ ಮೂರನೇ ಏಕದಿನ ಪಂದ್ಯವೇ ರೋಹಿತ್ ಶರ್ಮಾ ಅವರ ಕೊನೆಯ ಅಂತಾರಾಷ್ಟ್ರೀಯ ಪಂದ್ಯವಾಗಲಿದೆ ಎಂಬ ಊಹಾಪೋಹಗಳಿಗೆ ಬಿಸಿಸಿಐ ಸ್ಪಷ್ಟನೆ ನೀಡಿದೆ.
ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ಈ ವದಂತಿಗಳನ್ನು ಸಂಪೂರ್ಣವಾಗಿ ತಳ್ಳಿಹಾಕಿದ್ದು,
“ಲಾರ್ಡ್ಸ್ನಲ್ಲಿ ನಡೆಯುವ ಮೂರನೇ ಏಕದಿನ ಪಂದ್ಯವೇ ರೋಹಿತ್ ಶರ್ಮಾ ಅವರ ಕೊನೆಯ ಪಂದ್ಯ ಎಂಬ ಬಗ್ಗೆ ಯಾವುದೇ ಚರ್ಚೆಯೇ ನಡೆದಿಲ್ಲ. ರೋಹಿತ್ ಭಾರತದ ಏಕದಿನ ತಂಡದ ನಿಯಮಿತ ಸದಸ್ಯರಾಗಿದ್ದು, ತಂಡದ ಯೋಜನೆಗಳಲ್ಲಿ ಇರುವವರೆಗೂ ಭಾರತವನ್ನು ಪ್ರತಿನಿಧಿಸುತ್ತಾರೆ. ಆದ್ದರಿಂದ ಲಾರ್ಡ್ಸ್ ಪಂದ್ಯವೇ ಅವರ ಕೊನೆಯ ಪಂದ್ಯ ಅಲ್ಲ.” ಎಂದು ಸ್ಪಷ್ಟಪಡಿಸಿದ್ದಾರೆ.
ಈ ಸ್ಪಷ್ಟನೆಗೆ ಮುನ್ನ, ಕೆಲವು ವರದಿಗಳಲ್ಲಿ ಆಯ್ಕೆ ಸಮಿತಿ 2027ರ ಏಕದಿನ ವಿಶ್ವಕಪ್ ಯೋಜನೆಗಳಲ್ಲಿ ರೋಹಿತ್ ಶರ್ಮಾ ಇಲ್ಲ ಎಂದು ತಿಳಿಸಿದ್ದು, ಇಂಗ್ಲೆಂಡ್ ವಿರುದ್ಧದ ಮೂರನೇ ಏಕದಿನ ಪಂದ್ಯವೇ ಅವರ ಕೊನೆಯ ಪಂದ್ಯವಾಗಬಹುದು ಎಂದು ಹೇಳಲಾಗಿತ್ತು
