ಕೆಡಿಪಿ ಸಭೆಯಲ್ಲಿ ಪೊಲೀಸ್ ಇಲಾಖೆಯ ದಿಟ್ಟ ಕಾರ್ಯವೈಖರಿಗೆ ಶಾಸಕ ದೊಡ್ಡನಗೌಡ ಹೆಚ್. ಪಾಟೀಲರಿಂದ ಭಾರೀ ಮೆಚ್ಚುಗೆ
ಕುಷ್ಟಗಿ, ಜುಲೈ 21: ಜಿಲ್ಲಾ ಪಂಚಾಯತ್ ಕೊಪ್ಪಳ ಹಾಗೂ ತಾಲೂಕು ಪಂಚಾಯತ್ ಕುಷ್ಟಗಿ ಪಟ್ಟಣದ ಸರ್ಕ್ಯೂಟ್ ಹೌಸ್ ನಲ್ಲಿ ಇಂದು (21/07/2026) ವಿರೋಧ ಪಕ್ಷದ ಮುಖ್ಯ ಸಚೇತಕರು ಹಾಗೂ ಕುಷ್ಟಗಿ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕ ದೊಡ್ಡನಗೌಡ ಹೆಚ್. ಪಾಟೀಲ ಅವರ ಅಧ್ಯಕ್ಷತೆಯಲ್ಲಿ ನಡೆದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಪೊಲೀಸ್ ಇಲಾಖೆಯ ಪರಿಣಾಮಕಾರಿ ಕಾರ್ಯನಿರ್ವಹಣೆಗೆ ವಿಶೇಷ ಪ್ರಶಂಸೆ ವ್ಯಕ್ತವಾಯಿತು. ಸಭೆಯಲ್ಲಿ ಕುಷ್ಟಗಿ ತಾಲೂಕಿನ ವಿವಿಧ ಇಲಾಖೆಗಳ ಅನುಷ್ಠಾನ ಅಧಿಕಾರಿಗಳು ಭಾಗವಹಿಸಿ, ತಮ್ಮ ಇಲಾಖೆಗಳ ಪ್ರಗತಿ, ಸಾಧನೆ ಹಾಗೂ…
