ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ಬಾಗಮಾರ ಸೇವಾ ಸಮಿತಿ (ರಿ) ಹಾಗೂ ಭಗವಾನ್ ಮಹಾವೀರ ಜೈನ ಆಯುರ್ವೇದ ಮೆಡಿಕಲ್ ಕಾಲೇಜು, ಆಸ್ಪತ್ರೆ ಮತ್ತು ಪಿ.ಜಿ. ಸೆಂಟರ್ ವತಿಯಿಂದ ಆಯೋಜಿಸಿರುವ ಘಟಿಕೋತ್ಸವ ಕಾರ್ಯಕ್ರಮಕ್ಕೆ ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಮಾನ್ಯ ಶ್ರೀ ಥಾವರಚಂದಜಿ ಗೆಹ್ಲೋಟ್ ಅವರು ಉದ್ಘಾಟಕರು ಹಾಗೂ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.
ಗುರುವಾರ, ಜುಲೈ 23, 2026 ರಂದು ಬೆಳಿಗ್ಗೆ 11.00 ಗಂಟೆಗೆ ಗಜೇಂದ್ರಗಡದ ಟಿಟಿಡಿ ಕಲ್ಯಾಣ ಮಂಟಪದಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ರಾಜ್ಯಪಾಲರು ಭಾಗವಹಿಸಿ ಘಟಿಕೋತ್ಸವವನ್ನು ಉದ್ಘಾಟಿಸಲಿದ್ದಾರೆ.
ಈ ಸಂದರ್ಭದಲ್ಲಿ ಬಾಗಮಾರ ಸೇವಾ ಸಮಿತಿ (ರಿ) ಹಾಗೂ ಭಗವಾನ್ ಮಹಾವೀರ ಜೈನ ಆಯುರ್ವೇದ ಮೆಡಿಕಲ್ ಕಾಲೇಜು, ಆಸ್ಪತ್ರೆ ಮತ್ತು ಪಿ.ಜಿ. ಸೆಂಟರ್ ಅಧ್ಯಕ್ಷರಾದ ಅಶೋಕ್ ಕುಮಾರ್ ಬಾಗಮಾರ ಅವರು ಸಂಸ್ಥೆಯ ಪರವಾಗಿ ಹಾಗೂ ಗಜೇಂದ್ರಗಡದ ಸಮಸ್ತ ನಾಗರಿಕರ ಪರವಾಗಿ ಗೌರವಾನ್ವಿತ ರಾಜ್ಯಪಾಲರಿಗೆ ಆತ್ಮೀಯ ಸ್ವಾಗತ ಕೋರಿದ್ದಾರೆ.
ಅದೇ ರೀತಿ, ಸಂಸ್ಥೆಯ ಕಾರ್ಯದರ್ಶಿಗಳಾದ ಅಜಿತಕುಮಾರ್ ಬಾಗಮಾರ ಅವರು ಕೂಡ ತಮ್ಮ ಸಂಸ್ಥೆಯ ಪರವಾಗಿ ಹಾಗೂ ಗಜೇಂದ್ರಗಡದ ನಾಗರಿಕರ ಪರವಾಗಿ ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರಚಂದಜಿ ಗೆಹ್ಲೋಟ್ ಅವರಿಗೆ ಹೃತ್ಪೂರ್ವಕ ಸ್ವಾಗತವನ್ನು ಕೋರಿದ್ದಾರೆ.
ಈ ಐತಿಹಾಸಿಕ ಕಾರ್ಯಕ್ರಮದಲ್ಲಿ ಸಾರ್ವಜನಿಕರು, ಗಣ್ಯರು, ವಿದ್ಯಾರ್ಥಿಗಳು, ಹಳೆ ವಿದ್ಯಾರ್ಥಿಗಳು ಹಾಗೂ ಶಿಕ್ಷಣಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಸಂಸ್ಥೆಯ ಆಡಳಿತ ಮಂಡಳಿ ಮನವಿ ಮಾಡಿದೆ.
