Top News

ಅತ್ಯಾಚಾರ ಪ್ರಕರಣ: ‘ತೆಹೆಲ್ಕಾ’ ಮಾಜಿ ಸಂಪಾದಕ ತರುಣ್ ತೇಜ್‌ಪಾಲ್‌ಗೆ 10ವರ್ಷ ಜೈಲು

ಗೋವಾ: ಕಿರಿಯ ಮಹಿಳಾ ಸಹೋದ್ಯೋಗಿ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ತೆಹೆಲ್ಕಾ ನಿಯತಕಾಲಿಕೆ ಮಾಜಿ ಸಂಪಾದಕ ತರುಣ್ ತೇಜ್‌ಪಾಲ್‌ಗೆ ನ್ಯಾಯಾಲಯ 10 ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.ಅತ್ಯಾಚಾರ ಪ್ರಕರಣದಲ್ಲಿ ತೇಜ್‌ಪಾಲ್ ಅವರನ್ನು ಖುಲಾಸೆಗೊಳಿಸಿ 2021ರಲ್ಲಿ ಗೋವಾದ ಸೆಷನ್ಸ್ ನ್ಯಾಯಾಲಯ ನೀಡಿದ್ದ ಆದೇಶವನ್ನು ಬಾಂಬೆ ಹೈಕೋರ್ಟ್‌ನ ಗೋವಾ ಪೀಠ ತಳ್ಳಿ ಹಾಕಿ 10 ವರ್ಷ ಜೈಲು ಶಿಕ್ಷೆ ವಿಧಿಸಿದೆ.

ನ್ಯಾಯಮೂರ್ತಿಗಳಾದ ನೀಲಾ ಗೋಖಲೆ ಮತ್ತು ಅಮಿತ್ ಜಾಮ್‌ಸಂಡೇಕರ್ ಅವರಿದ್ದ ವಿಭಾಗೀಯ ಪೀಠ ಗುರುವಾರ ಬೆಳಗ್ಗೆ ತಪ್ಪಿತಸ್ಥ ಎಂದು ತೀರ್ಪು ಪ್ರಕಟಿಸಿತ್ತು. ಇಂದು ಮಧ್ಯಾಹ್ನವೇ ಶಿಕ್ಷೆ ಪ್ರಮಾಣ ಪ್ರಕಟಿಸಿದ್ದು ತೇಜ್‌ಪಾಲ್‌ಗೆ 10 ವರ್ಷ ಜೈಲು ಶಿಕ್ಷೆ ವಿಧಿಸಿದೆ.

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 354ಎ, 354ಬಿ ಜೊತೆಗೆ ಸೆಕ್ಷನ್ 376(2)(ಎಫ್) ಮತ್ತು 376(2)(ಕೆ) ಅಡಿಯಲ್ಲಿ ತೇಜ್‌ಪಾಲ್ ಅವರನ್ನು ಅತ್ಯಾಚಾರ ಮತ್ತು ಲೈಂಗಿಕ ಕಿರುಕುಳದ ಅಪರಾಧಗಳಲ್ಲಿ ತಪ್ಪಿತಸ್ಥ ಎಂದು ನ್ಯಾಯಾಲಯ ಹೇಳಿದೆ.

Leave a Reply

Your email address will not be published. Required fields are marked *

error: Content is protected !!