ವಿಧಾನ ಪರಿಷತ್ ಸದಸ್ಯೆಯಾಗಿ ಗಾಯತ್ರಿ ಶಾಂತೇಗೌಡ ಪ್ರಮಾಣವಚನ ಸ್ವೀಕಾರ
ಬೆಂಗಳೂರು: ಚಿಕ್ಕಮಗಳೂರು ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ಕಾಂಗ್ರೆಸ್ ನಾಯಕಿ ಗಾಯತ್ರಿ ಶಾಂತೇಗೌಡ ಅವರು ವಿಧಾನ ಪರಿಷತ್ (MLC) ಸದಸ್ಯೆಯಾಗಿ ಅಧಿಕೃತವಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ಕಚೇರಿಯಲ್ಲಿ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಲಾಯಿತು. ನಾಲ್ಕುವರೆ ವರ್ಷಗಳ ಕಾನೂನು ಹೋರಾಟ: 2021ರ ಡಿಸೆಂಬರ್‌ನಲ್ಲಿ ನಡೆದಿದ್ದ ಚಿಕ್ಕಮಗಳೂರು ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಎಂ.ಕೆ. ಪ್ರಾಣೇಶ್ ಅವರು ಕೇವಲ 6 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ ಎಂದು ಘೋಷಿಸಲಾಗಿತ್ತು. ಆದರೆ, ಸ್ಥಳೀಯ…
