27ನೇ ಕಾರ್ಗಿಲ್ ವಿಜಯೋತ್ಸವ: ವಿಜಯನಗರದಲ್ಲಿ ಹುತಾತ್ಮರಿಗೆ ಭಾವಪೂರ್ಣ ನಮನ – ರಾಷ್ಟ್ರಧ್ವಜದೊಂದಿಗೆ ಭವ್ಯ ಮೆರವಣಿಗೆ, ವಿದ್ಯಾರ್ಥಿಗಳಲ್ಲಿ ದೇಶಭಕ್ತಿ ಜಾಗೃತಿ
ವಿಜಯನಗರ ಜಿಲ್ಲೆಯಲ್ಲಿಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ, ವಿಜಯನಗರ ಜಿಲ್ಲಾ ಘಟಕ ಹಾಗೂ ತಾಲೂಕು ಘಟಕಗಳ ಸಂಯುಕ್ತ ಆಶ್ರಯದಲ್ಲಿ 27ನೇ ಕಾರ್ಗಿಲ್ ವಿಜಯೋತ್ಸವ ಹಾಗೂ ಕಾರ್ಗಿಲ್ ಯುದ್ಧದ ಹುತಾತ್ಮರಿಗೆ ಗೌರವ ನಮನ ಸಲ್ಲಿಸುವ ಕಾರ್ಯಕ್ರಮವನ್ನು ಹೊಸಪೇಟೆಯ ಫ್ರೀಡಂ ಪಾರ್ಕ್‌ನಲ್ಲಿ ಅತ್ಯಂತ ವಿಜೃಂಭಣೆಯಿಂದ ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ವಿಜಯನಗರ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ಕೆ. ಎಂ. ರಾಜಶೇಖರ್, ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರಾದ ಸುಬ್ರಹ್ಮಣ್ಯ ಎನ್, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ಕವಿತಾ ಎಸ್. ಮುನ್ನಿಕೇರಿ, ಬೆಂಗಳೂರು…
ಮುಂಜಾಗ್ರತಾ ಕ್ರಮವಾಗಿ ಡಾಲರ್ಸ್ ಕಾಲೋನಿ ನಿವಾಸದಿಂದಲೇ ವಾಟಾಳ್ ನಾಗರಾಜ್ ವಶಕ್ಕೆ
ಬೆಂಗಳೂರು: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕದ ಹಿತಾಸಕ್ತಿಯನ್ನು ಕಾಪಾಡಬೇಕು ಎಂದು ಆಗ್ರಹಿಸಿ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಹೋರಾಟಕ್ಕೆ ಮುಂದಾಗಿದ್ದಾರೆ. ಅಖಂಡ ಕರ್ನಾಟಕ ಬಂದ್‌ಗೆ ಕರೆ ನೀಡಿರುವ ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು ಮುಂಜಾಗ್ರತಾ ಕ್ರಮವಾಗಿ ಅವರ ಡಾಲರ್ಸ್ ಕಾಲೋನಿ ನಿವಾಸದಿಂದಲೇ ವಶಕ್ಕೆ ಪಡೆದಿದ್ದಾರೆ. ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ರಾಜ್ಯದ ಹಿತಾಸಕ್ತಿ ಕಾಪಾಡಬೇಕು ಎಂದು ಆಗ್ರಹಿಸಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಇಂದು ಪ್ರತಿಭಟನೆ ನಡೆಸಲು ಸಿದ್ಧತೆ ನಡೆದಿತ್ತು. ಆದರೆ…
ಬೆಂಗಳೂರು ನಮ್ಮ ಮೆಟ್ರೋ ಹೊಸೂರಿಗೆ ವಿಸ್ತರಣೆ ? ಕೇಂದ್ರದೊಂದಿಗೆ ಚರ್ಚೆ ಆರಂಭಿಸಿದ ತಮಿಳುನಾಡು ಸರ್ಕಾರ
Bengaluru Metro: ಬ್ರ್ಯಾಂಡ್ ಬೆಂಗಳೂರು ಹಾಗೂ ಬೆಂಗಳೂರಿನಿಂದ ಆಗುವ ಲಾಭ – ಲೆಕ್ಕಾಚಾರದ ಮೇಲೆ ತಮಿಳುನಾಡು ಮತ್ತೊಮ್ಮೆ ಕಣ್ಣಿಟ್ಟಿದೆ. ಬೆಂಗಳೂರಿಗೆ ಪೈಪೋಟಿ ನೀಡುವ ಹಲವು ಯೋಜನೆಗಳನ್ನು ಈಗಾಗಲೇ ತಮಿಳುನಾಡು ಈ ಹಿಂದಿನ ಸರ್ಕಾರ ದ್ರಾವಿಣ ಮುನ್ನೇತ್ರ ಕಳಗಂ ಪಕ್ಷವು ಪ್ರಾರಂಭಿಸಿತ್ತು.ಇದೀಗ ತಮಿಳುನಾಡಿನಲ್ಲಿ ಆಡಳಿತ ನಡೆಸುತ್ತಿರುವ ತಮಿಳಗ ವೆಟ್ರಿ ಕಳಗಂ ಪಕ್ಷವು ಬೆಂಗಳೂರಿನ ನಮ್ಮ ಮೆಟ್ರೋ ಜಾಲದ ಮೇಲೆ ಕಣ್ಣಿಟ್ಟಿದೆ. ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಪರ್ಯಾಯವಾಗಿ ಹೊಸೂರಿನಲ್ಲಿ ಹೊಸ ಹಾಗೂ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಮಾಡಬೇಕು…
ತಾರೀಣಿ ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಸೈನ್ಸಸ್‌ನಲ್ಲಿ 2026–27ನೇ ಸಾಲಿನ B.Sc. Nursing ಮತ್ತು GNM Nursing ಪ್ರವೇಶಾತಿ ಆರಂಭ
ಗಜೇಂದ್ರಗಡ, ಜುಲೈ 12: ಆರೋಗ್ಯ ಕ್ಷೇತ್ರದಲ್ಲಿ ಉನ್ನತ ಶಿಕ್ಷಣ ಪಡೆದು ಉತ್ತಮ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವ ವಿದ್ಯಾರ್ಥಿಗಳಿಗೆ ಗಜೇಂದ್ರಗಡದ ತಾರೀಣಿ ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಸೈನ್ಸಸ್ ಸುವರ್ಣಾವಕಾಶ ಕಲ್ಪಿಸಿದೆ. 2026–27ನೇ ಶೈಕ್ಷಣಿಕ ಸಾಲಿನ B.Sc. Nursing ಹಾಗೂ GNM Nursing ಕೋರ್ಸ್‌ಗಳ ಪ್ರವೇಶಾತಿ ಪ್ರಕ್ರಿಯೆ ಆರಂಭಗೊಂಡಿದ್ದು, ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪ್ರಸ್ತುತ ಭಾರತ ಸೇರಿದಂತೆ ವಿಶ್ವದಾದ್ಯಂತ ಆರೋಗ್ಯ ಸೇವಾ ಕ್ಷೇತ್ರವು ವೇಗವಾಗಿ ಬೆಳೆಯುತ್ತಿದ್ದು, ನರ್ಸಿಂಗ್ ವೃತ್ತಿಪರರಿಗೆ ಹೆಚ್ಚಿನ ಬೇಡಿಕೆ ನಿರ್ಮಾಣವಾಗಿದೆ. ಉತ್ತಮ ಸಂಬಳ, ಗೌರವಯುತ ಉದ್ಯೋಗ…
ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸ್ಥಾನ ಸಿಕ್ಕೇ ಸಿಗುತ್ತೆ : ಸಿಎಂ ಡಿ ಕೆ ಶಿವಕುಮಾರ್ ಹೇಳಿಕೆ
ಬೆಂಗಳೂರು: ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸೂಕ್ತ ಹಾಗೂ ಮುಂಚೂಣಿ ಪ್ರಾತಿನಿಧ್ಯ ನೀಡುವ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಹತ್ವದ ಸುಳಿವು ನೀಡಿದ್ದಾರೆ. ಕಾಂಗ್ರೆಸ್ ಸರ್ಕಾರವು ಮಹಿಳಾ ಸಬಲೀಕರಣಕ್ಕೆ ಸದಾ ಬದ್ಧವಾಗಿದ್ದು, ಮುಂದಿನ ಸಂಪುಟ ವಿಸ್ತರಣೆ ವೇಳೆ ಮಹಿಳೆಯರಿಗೆ ಸೂಕ್ತ ಸ್ಥಾನಮಾನ ನೀಡಿ ಹೆಚ್ಚು ಶಕ್ತಿ ತುಂಬಲಾಗುವುದು ಎಂದು ಅವರು ಭರವಸೆ ನೀಡಿದ್ದಾರೆ. ರಾಹುಲ್ ಗಾಂಧಿ ಅವರು ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಕುರಿತು ಮಾತನಾಡಿದ್ದಕ್ಕೆ ಪ್ರತಿಯಾಗಿ, ‘ಕರ್ನಾಟಕ ಸಂಪುಟದಲ್ಲಿ ಮಹಿಳೆಯರಿಲ್ಲ’ ಎಂದು ಕೇಂದ್ರ ಸಚಿವ ಕಿರಣ್…
ಡಿಲಿಮಿಟೇಶನ್ ಮಸೂದೆಗೆ ಡಿಎಂಕೆ ಷರತ್ತುಬದ್ಧ ಬೆಂಬಲ?
ನವದೆಹಲಿ,ಆ.7- ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಮಹತ್ವಾಕಾಂಕ್ಷೆಯ ಡಿಲಿಮಿಟೇಶನ್ (ಕ್ಷೇತ್ರ ಪುನರ್‌ವಿಂಗಡಣೆ) ಮಸೂದೆಯನ್ನು ಸಂಸತ್ತಿನಲ್ಲಿ ಮಂಡಿಸುವ ಕುರಿತು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗಳು ನಡೆಯುತ್ತಿವೆ. ದಕ್ಷಿಣ ಭಾರತದ ಪ್ರಮುಖ ಪ್ರಾದೇಶಿಕ ಪಕ್ಷವಾದ ತಮಿಳುನಾಡಿನ ಡಿಎಂಕೆ ಪಕ್ಷವು ಈ ಮಸೂದೆಗೆ ಬೆಂಬಲ ಸೂಚಿಸಲು ಕೇಂದ್ರ ಸರ್ಕಾರದ ಮುಂದೆ ಮೂರು ಪ್ರಮುಖ ಷರತ್ತುಗಳನ್ನು ವಿಧಿಸಿದೆ ಎಂದು ಪಕ್ಷದ ಆಂತರಿಕ ಮೂಲಗಳು ತಿಳಿಸಿವೆ. ಸೀಟುಗಳ ಸ್ಥಗಿತ ವಿಸ್ತರಣೆ : 1971ರ ಜನಗಣತಿಯ ಆಧಾರದ ಮೇಲೆ ಲೋಕಸಭಾ ಸ್ಥಾನಗಳನ್ನು ಸ್ಥಗಿತಗೊಳಿಸುವ ವ್ಯವಸ್ಥೆಯು 2027ಕ್ಕೆ ಕೊನೆಗೊಳ್ಳಲಿದೆ….
ಲಕ್ಷ್ಮೇಶ್ವರ : ಸಿ.ಸಿ ರಸ್ತೆ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದ ಶಾಸಕ ಡಾ.ಚಂದ್ರು ಲಮಾಣಿ |NKS TV4
ಸಿ.ಸಿ ರಸ್ತೆ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದ ಶಾಸಕ ಡಾ.ಚಂದ್ರು ಲಮಾಣಿ ಲಕ್ಷ್ಮೇಶ್ವರ “ತಾಲೂಕಿನ ಕುಂದ್ರಳ್ಳಿ ಗ್ರಾಮದಿಂದ ಬಟ್ಟೂರು ಲಕ್ಷ್ಮೇಶ್ವರ ಸಂಪರ್ಕಿಸುವ ಮೇನ್ ರಸ್ತೆ ಸಿ.ಸಿ ರಸ್ತೆ ನಿರ್ಮಾಣಕ್ಕೆ ಸುಮಾರು 50 ಲಕ್ಷ ರೂಪಾಯಿ ವೆಚ್ಚದ ಕಾಮಗಾರಿಗೆ ಶಾಸಕ ಡಾ ಚಂದ್ರು ಲಮಾಣಿ ಅವರು ಹಾಗೂ ಬಟ್ಟೂರು ಗ್ರಾಮ ಪಂಚಾಯತಿಯ ಅಧ್ಯಕ್ಷನಿಯಾದ ನೀಲವ್ವ ಮಂಜಪ್ಪ ಕಳಸದ ಅವರು ಕುಂದ್ರಳ್ಳಿ ಗ್ರಾಮದಲ್ಲಿ ಗ್ರಾಮಸ್ಥರೊಂದಿಗೆ ಭೂಮಿ ಪೂಜೆ ನೆರವೇರಿಸಿದರು ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಶಾಸಕ ಡಾ ಚಂದ್ರು ಲಮಾಣಿ…
ಮಣ್ಣೆತ್ತಿನ ಅಮಾವಾಸ್ಯೆಯ ಸಂಭ್ರಮ! ಎತ್ತಿನ ವ್ಯಾಪಾರ ಬಲು ಜೋರು
ಹೌದು ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣ ಸೇರಿದಂತೆ ತಾಲೂಕಿನ ಎಲ್ಲಾ ಗ್ರಾಮಗಳಲ್ಲಿ ಮಣ್ಣೆತ್ತಿನ ಅಮಾವಾಸ್ಯೆ ಆಚರಣೆಯ ಸಂಭ್ರಮ ಅದರಂತೆ ಲಕ್ಷ್ಮೇಶ್ವರ ಸಮೀಪದ ಶಿಗ್ಲಿ ಗ್ರಾಮದ ಧಾರ್ಮಿಕ ಮುಖಂಡರಾದ ವೀರಣ್ಣ ಪವಾಡದ ಅವರ ಮನೆಯಲ್ಲಿ ಮಣ್ಣೆತ್ತಿನ ಅಮವಾಸೆಯನ್ನು ಸಂಭ್ರಮದಿಂದ ಆಚರಿಸಲಾಯಿತು ಮಣ್ಣೆತ್ತಿನ ಅಮಾವಾಸ್ಯೆ ಆಚರಣೆ ಕುರಿತು ಮಾತನಾಡಿದ ವೀರಣ್ಣ ಪವಾಡದ ಆವರು “ಮಣ್ಣು” ಮತ್ತು “ಎತ್ತು” ಎಂಬ ಎರಡು ಪದಗಳ ಸಂಯೋಜನೆಯಿಂದ “ಮಣ್ಣೆತ್ತು” ಎಂಬ ಪದ ರೂಪುಗೊಂಡಿದೆ. ಕೃಷಿಯ ಮೂಲಾಧಾರವಾದ ಭೂಮಿ ಮತ್ತು ಕೃಷಿ ಕಾರ್ಯದ ಪ್ರಮುಖ ಸಹಚರರಾದ…
