Top News

ಗದಗ: ತಾಂತ್ರಿಕ ತೊಂದರೆಯಿಂದ ವಿಂಡ್ ಫ್ಯಾನ್ ಧಗ ಧಗನೆ ಹೊತ್ತಿ ಉರಿದ ಘಟನೆ ಗದಗ ತಾಲೂಕಿನ ಹೊಸೂರು ಗ್ರಾಮದ ಬಳಿ ನಡೆದಿದೆ.

ಗಾಮೇಸ್ ಕಂಪನಿಗೆ ಸೇರಿದ ವಿಂಡ್ ಫ್ಯಾನ್ ಇದಾಗಿದ್ದು, ಕಳೆದ 10 ವರ್ಷಗಳ ಹಿಂದೆ ಅಳವಡಿಸಿದ್ದ ವಿಂಡ್ ಫ್ಯಾನ್ ಎನ್ನಲಾಗಿದೆ. ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ನಿಂದ ಈ ಘಟನೆ ನಡೆದಿರುವ ಶಂಕೆ ವ್ಯಕ್ತವಾಗುತ್ತಿದೆ. ವೇಗವಾಗಿ ಗಾಳಿ ಬಿಸುತ್ತಿರುವುದರಿಂದ ಫ್ಯಾನ್ ನಿಯಂತ್ರಣಕ್ಕೆ ಸಿಗಲಿಲ್ಲ. ಪವರ್ ಸಪ್ಲಾಯ್ ಬಂದ್ ಮಾಡಿದ್ರೂ ಫ್ಯಾನ್ ತಿರುಗುತ್ತಿತ್ತು. ಮೋಟರ್ ಬಿಸಿಯಾಗಿ ನಂತರ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ ಎಂದು ಟೆಕ್ನಿಶಿಯನ್ ಸ್ಪಷ್ಟನೆ ನೀಡಿದ್ದಾರೆ. ಫ್ಯಾನ್ ನಲ್ಲಿ ಬೆಂಕಿ ಕಂಡು ಸ್ಥಳಿಯ ರೈತರಲ್ಲಿ ಆತಂಕ ಮೂಡಿದೆ. ಜಮೀನಿನಲ್ಲಿ ಕೆಲಸ…

Read More

ಮುಂಜಾಗ್ರತಾ ಕ್ರಮವಾಗಿ ಡಾಲರ್ಸ್‌ ಕಾಲೋನಿ ನಿವಾಸದಿಂದಲೇ ವಾಟಾಳ್‌ ನಾಗರಾಜ್‌ ವಶಕ್ಕೆ

ಬೆಂಗಳೂರು: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕದ ಹಿತಾಸಕ್ತಿಯನ್ನು ಕಾಪಾಡಬೇಕು ಎಂದು ಆಗ್ರಹಿಸಿ ಕನ್ನಡ ಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಹೋರಾಟಕ್ಕೆ ಮುಂದಾಗಿದ್ದಾರೆ. ಅಖಂಡ ಕರ್ನಾಟಕ ಬಂದ್‌ಗೆ ಕರೆ ನೀಡಿರುವ ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್‌ ನಾಗರಾಜ್‌ ಅವರನ್ನು ಪೊಲೀಸರು ಮುಂಜಾಗ್ರತಾ ಕ್ರಮವಾಗಿ ಅವರ ಡಾಲರ್ಸ್‌ ಕಾಲೋನಿ ನಿವಾಸದಿಂದಲೇ ವಶಕ್ಕೆ ಪಡೆದಿದ್ದಾರೆ. ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ರಾಜ್ಯದ ಹಿತಾಸಕ್ತಿ ಕಾಪಾಡಬೇಕು ಎಂದು ಆಗ್ರಹಿಸಿ ವಾಟಾಳ್‌ ನಾಗರಾಜ್‌ ನೇತೃತ್ವದಲ್ಲಿ ಇಂದು ಪ್ರತಿಭಟನೆ ನಡೆಸಲು ಸಿದ್ಧತೆ ನಡೆದಿತ್ತು. ಆದರೆ…

Read More

ಮಣ್ಣೆತ್ತಿನ ಅಮಾವಾಸ್ಯೆಯ ಸಂಭ್ರಮ! ಎತ್ತಿನ ವ್ಯಾಪಾರ ಬಲು ಜೋರು

ಹೌದು ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣ ಸೇರಿದಂತೆ ತಾಲೂಕಿನ ಎಲ್ಲಾ ಗ್ರಾಮಗಳಲ್ಲಿ ಮಣ್ಣೆತ್ತಿನ ಅಮಾವಾಸ್ಯೆ ಆಚರಣೆಯ ಸಂಭ್ರಮ ಅದರಂತೆ ಲಕ್ಷ್ಮೇಶ್ವರ ಸಮೀಪದ ಶಿಗ್ಲಿ ಗ್ರಾಮದ ಧಾರ್ಮಿಕ ಮುಖಂಡರಾದ ವೀರಣ್ಣ ಪವಾಡದ ಅವರ ಮನೆಯಲ್ಲಿ ಮಣ್ಣೆತ್ತಿನ ಅಮವಾಸೆಯನ್ನು ಸಂಭ್ರಮದಿಂದ ಆಚರಿಸಲಾಯಿತು ಮಣ್ಣೆತ್ತಿನ ಅಮಾವಾಸ್ಯೆ ಆಚರಣೆ ಕುರಿತು ಮಾತನಾಡಿದ ವೀರಣ್ಣ ಪವಾಡದ ಆವರು “ಮಣ್ಣು” ಮತ್ತು “ಎತ್ತು” ಎಂಬ ಎರಡು ಪದಗಳ ಸಂಯೋಜನೆಯಿಂದ “ಮಣ್ಣೆತ್ತು” ಎಂಬ ಪದ ರೂಪುಗೊಂಡಿದೆ. ಕೃಷಿಯ ಮೂಲಾಧಾರವಾದ ಭೂಮಿ ಮತ್ತು ಕೃಷಿ ಕಾರ್ಯದ ಪ್ರಮುಖ ಸಹಚರರಾದ…

Read More

ರೋಹಿತ್ ಶರ್ಮಾ ನಿವೃತ್ತಿ ವದಂತಿ ಬೆನ್ನಲ್ಲೇ ಫ್ಯಾನ್ಸ್‌ಗೆ ಗುಡ್ ನ್ಯೂಸ್ ಕೊಟ್ಟ BCCI!

ಭಾರತ ಹಾಗೂ ಇಂಗ್ಲೆಂಡ್ ನಡುವಿನ ಮೂರನೇ ಏಕದಿನ ಪಂದ್ಯವೇ ರೋಹಿತ್ ಶರ್ಮಾ ಅವರ ಕೊನೆಯ ಅಂತಾರಾಷ್ಟ್ರೀಯ ಪಂದ್ಯವಾಗಲಿದೆ ಎಂಬ ಊಹಾಪೋಹಗಳಿಗೆ ಬಿಸಿಸಿಐ ಸ್ಪಷ್ಟನೆ ನೀಡಿದೆ. ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ಈ ವದಂತಿಗಳನ್ನು ಸಂಪೂರ್ಣವಾಗಿ ತಳ್ಳಿಹಾಕಿದ್ದು, “ಲಾರ್ಡ್ಸ್‌ನಲ್ಲಿ ನಡೆಯುವ ಮೂರನೇ ಏಕದಿನ ಪಂದ್ಯವೇ ರೋಹಿತ್ ಶರ್ಮಾ ಅವರ ಕೊನೆಯ ಪಂದ್ಯ ಎಂಬ ಬಗ್ಗೆ ಯಾವುದೇ ಚರ್ಚೆಯೇ ನಡೆದಿಲ್ಲ. ರೋಹಿತ್ ಭಾರತದ ಏಕದಿನ ತಂಡದ ನಿಯಮಿತ ಸದಸ್ಯರಾಗಿದ್ದು, ತಂಡದ ಯೋಜನೆಗಳಲ್ಲಿ ಇರುವವರೆಗೂ ಭಾರತವನ್ನು ಪ್ರತಿನಿಧಿಸುತ್ತಾರೆ. ಆದ್ದರಿಂದ ಲಾರ್ಡ್ಸ್ ಪಂದ್ಯವೇ…

Read More

ಪೀಣ್ಯ ದಾಸರಹಳ್ಳಿ: ಮಹಿಳೆಯ ಅಸ್ಥಿಪಂಜರ ಪತ್ತೆ

ಪೀಣ್ಯ ದಾಸರಹಳ್ಳಿ: ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಯೊಂದರಲ್ಲಿ ಅಸ್ಥಿಪಂಜರ ಪತ್ತೆಯಾಗಿದ್ದು, ಅದರ ಮಾದರಿಯನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ರವಾನೆ ಮಾಡಲಾಗಿದೆ. ಮಹಿಳೆ ದಾಕ್ಷಾಯಣಿ ಅವರ ಅಸ್ಥಿಪಂಜರ ಎಂಬುದು ಕಂಡುಬಂದಿದೆ ಎಂದು ಮೂಲಗಳು ಹೇಳಿವೆ. ‘ಮಹಿಳೆ ಮೃತಪಟ್ಟು ಒಂದೂವರೆ ವರ್ಷ ಕಳೆದಿದೆ. ಇದೀಗ ಅಸ್ಥಿಪಂಜರವು ದೊರೆತಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ. ‘ದಾಕ್ಷಾಯಣಿ ಅವರ ಪತಿ ಉಮೇಶ್‌ 10 ವರ್ಷದ ಹಿಂದೆ ಮೃತಪಟ್ಟಿದ್ದರು. ಬಳಿಕ ಅನಾರೋಗ್ಯದಿಂದ ಪುತ್ರ ಸಹ ಮೃತಪಟ್ಟಿದ್ದರು. ದಾಕ್ಷಾಯಣಿ ಅವರು ಒಬ್ಬರೇ ಮನೆಯಲ್ಲಿ ವಾಸವಿದ್ದರು. ಶೌಚಾಲಯಕ್ಕೆ…

Read More

ಸೂರ್ಯಕುಮಾರ್ ವಾಪಸ್, ರಜತ್ ಪಾಟೀದಾರ್ ಉಪನಾಯಕ; ಪರ್ಯಾಯ ಟಿ20 ತಂಡ ಪ್ರಕಟಿಸಿದ ಚೋಪ್ರಾ

ನಾಯಕನಾಗಿ ಸೂರ್ಯಕುಮಾರ್ ಯಾದವ್ ಮರಳಿದರೆ, ಉಪನಾಯಕನಾಗಿ ಆರ್‌ಸಿಬಿಯ ಚಾಂಪಿಯನ್ ರಜತ್ ಪಾಟೀದಾರ್ ಆಯ್ಕೆಯಾಗಿದ್ದಾರೆ. ಸತತ ಸೋಲಿನಿಂದ ಪ್ರಕಟಿಸಿರುವ ಪರ್ಯಾಯ ಭಾರತ ಟಿ20 ತಂಡದಲ್ಲಿ ಸ್ಥಾನ ಪಡೆದವರು ಯಾರು? ಟೀಂ ಇಂಡಿಯಾ ಪ್ಲೇಯಿಂಗ್ 11, ಟೀಂ ಇಂಡಿಯಾ ಆಯ್ಕೆ ಕುರಿತು ಹಲವು ಸವಾಲುಗಳು ಎದ್ದಿದೆ. 2026ರ ಟಿ20 ಚಾಂಪಿಯನ್ ತಂಡವೇ ಹೆಚ್ಚು ಸೂಕ್ತ ಅನ್ನೋ ಅಭಿಪ್ರಾಯಗಳು ವ್ಯಕ್ತವಾಗಿದೆ. ಇದರ ನಡುವೆ ಮಾಜಿ ಕ್ರಿಕೆಟಿಗ ಅಕಾಶ್ ಚೋಪ್ರಾ ಇದೀಗ ಪರ್ಯಾಯ ಟೀಂ ಇಂಡಿಯಾ ಟಿ20 ತಂಡ ಪ್ರಕಟಿಸಿದ್ದಾರೆ. ಈ ತಂಡದಲ್ಲಿ…

Read More

ಬಿಜೆಪಿ ಕಾರ್ಯಕರ್ತ ಪ್ರವೀಣ ನೆಟ್ಟಾರು ಹತ್ಯೆ ಕೇಸ್ : ಕೇರಳದಲ್ಲಿ ಮೋಸ್ಟ್ ವಾಂಟೆಡ್ ಉಮರ್ ಫಾರೂಕ್ ನನ್ನ ಅರೆಸ್ಟ್ ಮಾಡಿದ ‘NIA’

ಬೆಂಗಳೂರು : ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಭೀಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೀರ್ಘಕಾಲದಿಂದ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಉಮರ್ ಫಾರೂಕ್‌ನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಅಧಿಕಾರಿಗಳು ಯಶಸ್ವಿಯಾಗಿ ಬಂಧಿಸಿದ್ದಾರೆ. ಕೇರಳದ ಕೊಚ್ಚಿಯಲ್ಲಿ ಎನ್‌ಐಎ ತನಿಖಾ ತಂಡ ಕಾರ್ಯಾಚರಣೆ ನಡೆಸಿ ಈತನನ್ನು ಬಂಧಿಸಿದೆ.ಪ್ರಕರಣ ನಡೆದಾಗಿನಿಂದಲೂ ಎನ್‌ಐಎ ಅಧಿಕಾರಿಗಳು ಆರೋಪಿಯ ಪತ್ತೆಗಾಗಿ ನಿರಂತರ ಕಾರ್ಯಾಚರಣೆ ನಡೆಸುತ್ತಿದ್ದರು. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ನಡೆದ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ರಾಷ್ಟ್ರಮಟ್ಟದಲ್ಲಿ ಭಾರಿ…

Read More

ವಿಧಾನ ಪರಿಷತ್ ಸದಸ್ಯೆಯಾಗಿ ಗಾಯತ್ರಿ ಶಾಂತೇಗೌಡ ಪ್ರಮಾಣವಚನ ಸ್ವೀಕಾರ

ಬೆಂಗಳೂರು: ಚಿಕ್ಕಮಗಳೂರು ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ಕಾಂಗ್ರೆಸ್ ನಾಯಕಿ ಗಾಯತ್ರಿ ಶಾಂತೇಗೌಡ ಅವರು ವಿಧಾನ ಪರಿಷತ್ (MLC) ಸದಸ್ಯೆಯಾಗಿ ಅಧಿಕೃತವಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ಕಚೇರಿಯಲ್ಲಿ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಲಾಯಿತು. ನಾಲ್ಕುವರೆ ವರ್ಷಗಳ ಕಾನೂನು ಹೋರಾಟ: 2021ರ ಡಿಸೆಂಬರ್‌ನಲ್ಲಿ ನಡೆದಿದ್ದ ಚಿಕ್ಕಮಗಳೂರು ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಎಂ.ಕೆ. ಪ್ರಾಣೇಶ್ ಅವರು ಕೇವಲ 6 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ ಎಂದು ಘೋಷಿಸಲಾಗಿತ್ತು. ಆದರೆ, ಸ್ಥಳೀಯ…

Read More
error: Content is protected !!